ರಾಷ್ಟ್ರೀಯ

ಉ.ಪ್ರದೇಶ: ಇಂದು ಬಿಎಸ್‌ಪಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Pinterest LinkedIn Tumblr

ಬಜಪಲಕ್ನೋ: ಬಹಜನ ಸಮಾಜ ಪಕ್ಷದ ಮುಖಂಡರು ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರ ಪತ್ನಿ ಮತ್ತು ಪುತ್ರಿ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ಬಿಜೆಪಿಯ ಮಹಿಳಾ ಘಟಕ ಇಂದು ರಾಜ್ಯಾದ್ಯಂತ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬಿಎಸ್‌ಪಿ ಮುಖಂಡರು ಕುಟುಂಬದ ಸದಸ್ಯರ ವಿರುದ್ಧ ಅಸಭ್ಯ ಪದಗಳ ಬಳಕೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನುಪಮಾ ಜೈಸ್ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಉತ್ತರಪ್ರದೇಶದ ವಿಪಕ್ಷ ನಾಯಕ ನಸೀಮುದ್ದೀನ್ ಸಿದ್ದಿಕಿಯನ್ನು ಕೂಡಲೇ ವಜಾಗೊಳಿಸಿ ಇತರ ಬಿಎಸ್‌ಪಿ ನಾಯಕರನ್ನು ಬಂಧಿಸಬೇಕು ಎನ್ನುವುದೇ ನಮ್ಮ ಒತ್ತಾಯವಾಗಿದೆ ಎಂದು ಹೇಳಿದ್ದಾರೆ.

ಬಿಎಸ್‌ಪಿ ನಾಯಕರ ಹೇಳಿಕೆ ವಿರೋಧಿಸಿ ಸಾವಿರಾರು ಮಹಿಳಾ ಕಾರ್ಯಕರ್ತರು ನಾಳೆ ಬೀದಿಗಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ನಗರಸಭೆ ಅಧ್ಯಕ್ಷರು ಮತ್ತು ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನುಪಮಾ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

Comments are closed.