ರಾಷ್ಟ್ರೀಯ

ಮಾಯಾವತಿ, ಇತರೆ ಬಿಎಸ್ಪಿ ನಾಯಕರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ

Pinterest LinkedIn Tumblr

mayaಹಜಿಪುರ: ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಪಕ್ಷದ ಇತರೆ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಿಹಾರದ ವೈಶಾಲಿ ಜಿಲ್ಲಾ ಕೋರ್ಟ್ ಗುರುವಾರ ಆದೇಶಿಸಿದೆ.

ಪ್ರಚೋದನಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಜಿಪುರ ನಿವಾಸಿ ಅಜಿತ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೈರಾಮ್ ಪ್ರಸಾದ್ ಅವರು, ಮಾಯಾವತಿ ಹಾಗೂ ಇತರೆ ಮೂವರು ನಾಯಕರಾದ ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸಿಮುದ್ದೀನ್ ಸಿದ್ದಿಖಿ, ಉತ್ತರ ಪ್ರದೇಶ ಘಟಕದ ಅಧ್ಯಕ್ಷ ರಾಮ್ ಅಚಲ್ ರಾಜಭರ್ ಮತ್ತು ರಾಜ್ಯ ಕಾರ್ಯದರ್ಶಿ ಮೇವಾಲಾಲ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಗರ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ.

ಮಾಯಾವತಿ ಮತ್ತು ಇತರೆ ಬಿಎಸ್ಪಿ ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಇದರಿಂದ ದೇಶದ ಐಕ್ಯತೆಗೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿದಾರ ವಾದಿಸಿದ್ದರು.

Comments are closed.