ರಾಷ್ಟ್ರೀಯ

ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣ: ಶಾಸಕ ಶರದ್ ಚೌಹಾಣ್ ಬಂಧನ; ಕೇಜ್ರಿವಾಲ್’ಗೆ ಮತ್ತೊಂದು ಆಘಾತ

Pinterest LinkedIn Tumblr

aap-mla-sacked

ನವದೆಹಲಿ: ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಕಳೆದ ಬುಧವಾರ ಆಪ್ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು.

ಪಕ್ಷದಲ್ಲಿನ ಕಿರುಕುಳ ಕಾರಣ ಹೇಳಿಕೊಂಡು ಪಕ್ಷದ ಮಹಿಳಾ ಕಾರ್ಯಕರ್ತೆ ಸೋನಿ ಜುಲೈ 19ರಂದು ಇಲ್ಲಿನ ನರೇಲಾ ಎನ್ನುವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯ ಶಾಸಕರ ಕಿರಿಕಿರಿಯಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು ಸೋನಿ ಪೋಷಕರು ಆರೋಪಿಸಿ ದೂರು ನೀಡಿದ್ದರು.

ಪೊಲೀಸರು ನೀಡಿರುವ ಮಾಹಿತಿಯಂತೆ, ಸೋನಿ ಆತ್ಮಹತ್ಯೆಗೂ ಮುನ್ನ ವಾಟ್ಸ್ಆಪ್ನಲ್ಲಿ ದಾಖಲಿಸಿದ ವಿಡಿಯೋ ಕ್ಲಿಪ್ನಲ್ಲಿ ಭಾರದ್ವಾಜ್, ಅಮಿತ್ ಕುಮಾರ್ ಮತ್ತು ರಜನಿಕಾಂತ್ ಅವರು ತಾನು ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಬೆದರಿಸಿದ್ದರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಜೂನ್ 2ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

Comments are closed.