ಪಾಟ್ನಾ: ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಉಕ್ಕಿ ಹರಿಯುತ್ತಿರುವ ನದಿಗಳು ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿವೆ.
2.6 ಮಿಲಿಯನ್ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದು, 12 ಜಿಲ್ಲೆಗಳಲ್ಲಿ ಸುಮಾರು ಅರ್ಧ ಮಿಲಿಯನ್ ಕ್ಕಿಂತ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಭೇಟಿ ನೀಡಿದ್ದು, ಸಂತ್ರಸ್ತ ಜನರ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸಲು ಬಿಹಾರ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ನದಿ ನೀರು ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಸ್ಥಿತಿ ಮತ್ತಷ್ಟು ತೀವ್ರವಾಗಿದ್ದು, ರಕ್ಷಣಾ ಕಾರ್ಯಾಚರಣೆ ಹಾಗೂ ಪುನರ್ವಸತಿ ನೀಡುವ ಕಾರ್ಯಗಳು ಭರದಿಂದ ಸಾಗಿದೆ ಎಂದು ಬಿಹಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ಸರ್ಕಾರ ಎನ್ ಡಿಆರ್ ಎಫ್ ನ ಸುಮಾರು 587 ಸಿಬ್ಬಂದಿಗಳನ್ನು ನಿಯೋಜಿಸಿದೆ. ಜಲಸಂಪನ್ಮೂಲ ಇಲಾಖೆ ಮಾಹಿತಿ ಪ್ರಕಾರ ಬಿಹಾರದ 2,034 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು 2.50 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
Comments are closed.