ರಾಷ್ಟ್ರೀಯ

ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣ: ಅಮಿತ್ ಷಾ ಕೈಬಿಡಲು ಸುಪ್ರೀಂ ನಕಾರ

Pinterest LinkedIn Tumblr

amith-okನವದೆಹಲಿ (ಪಿಟಿಐ): ಸೊಹ್ರಾಬುದ್ದೀನ್‌ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್‌ನ ಮಾಜಿ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಕೈಬಿಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎ.ಬೋಬ್ಡೆ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠವು ಅರ್ಧ ಗಂಟೆ ವಿಚಾರಣೆ ಬಳಿಕ ಅರ್ಜಿ ತಿರಸ್ಕರಿಸಿತು.

ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಹರ್ಷಾ ಮಂಡೇರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಗುಜರಾತ್ ಪೊಲೀಸರು 2005ರಲ್ಲಿ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬಿ ಅವರನ್ನು ಎನ್‌ಕೌಂಟರ್ ಮಾಡಿದ್ದರು.

Comments are closed.