
ಗುವಾಹತಿ: ಅಸ್ಸಾಂನ ಕೋಕ್ರಝಾರ್ ನಲ್ಲಿ ಉಗ್ರರು ನಾಗರಿಕರ ಮೇಲೆ ಅಮಾನುಷವಾಗಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 14 ಜನ ಅಮಾಯಕರು ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಕೋಕ್ರಝಾರ್ ನ ಮಾರುಕಟ್ಟೆ ಪ್ರದೇಶದಲ್ಲಿ ನಾಲ್ವರು ಶಂಕಿತ ಉಗ್ರರು ಏಕಾಏಕಿ ಜನರ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರತಾ ಪಡೆಗಳು ಸಹ ಪ್ರತಿ ದಾಳಿ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಉಗ್ರನಿಂದ ಒಂದು ಎಕೆ-47 ಅನ್ನು ಜಪ್ತಿ ಮಾಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಅವರಿಂದ ದಾಳಿಯ ವಿವರ ಪೆಡದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ರಾಜ್ಯಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
Comments are closed.