ರಾಷ್ಟ್ರೀಯ

2014 ರಲ್ಲಿ 12 ಸಾವಿರಕ್ಕೂ ಹೆಚ್ಚು ರೈತರ ಆತ್ಮಹತ್ಯೆ!

Pinterest LinkedIn Tumblr

farmers-suicideನವದೆಹಲಿ: 2014 ರಲ್ಲಿ ದೇಶಾದ್ಯಂತ 12 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅಂಕಿ-ಅಂಶಗಳನ್ನು ಮೇಲ್ಮನೆಯಲ್ಲಿ ಮಂಡಿಸಿದ ಕೃಷಿ ಸಚಿವ ರಾಧಾ ಮೋಹನ್ ಸಿಂಗ್, 2014 ರಲ್ಲಿ 5,650 ರೈತರು ಹಾಗೂ 6,000 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 12 ಸಾವಿರಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರೈತರ ಆತ್ಮಹತ್ಯೆ ಬಗ್ಗೆ ಸಂಸದರು ರಾಜ್ಯಸಭೆಯ ಕಲಾಪದಲ್ಲಿ ಆತಂಕ ವ್ಯಕ್ತಪಡಿಸಿದ್ದು, ರಾಜ್ಯಸಭೆಗೆ ಉತ್ತರ ನೀಡಿರುವ ಸಚಿವ ರಾಧಾಮೋಹನ್ ಸಿಂಗ್, ರೈತರ ಆದಾಯವನ್ನು ಹೆಚ್ಚುವಂತೆ ಮಾಡುವುದು ಆತ್ಮಹತ್ಯೆಗಳನ್ನು ತಡೆಗಟ್ಟಲು ಇರುವ ಪರಿಹಾರವಾಗಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ.

Comments are closed.