ರಾಷ್ಟ್ರೀಯ

ಬರ್ಪೇಟಾ ಸತ್ರ ಪ್ರವೇಶ ತಡೆ ಪ್ರಕರಣ: ರಾಹುಲ್ ಗಾಂಧಿಗೆ ಸಮನ್ಸ್

Pinterest LinkedIn Tumblr

Rahul-Gandhiಗುವಾಹಟಿ: ಬರ್ಪೇಟಾ ಜಿಲ್ಲೆಯ ಸತ್ರಾ ದೇವಸ್ಥಾನ ಪ್ರವೇಶಿಸಲು ಯತ್ನಿಸಿದಾಗ ಆರೆಸ್ಸೆಸ್ ನನಗೆ ತಡೆಯೊಡ್ಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಸ್ಸಾಂನ ಕಾಮ್ರೂಪ್ ಮೆಟ್ರೋಪಾಲಿಟನ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸೆಪ್ಟೆಂಬರ್ 29ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?
2015 ಡಿಸೆಂಬರ್‍‍ನಲ್ಲಿ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಸತ್ರಾ ದೇವಸ್ಥಾನ ಪ್ರವೇಶಿಸಲು ಯತ್ನಿಸುತ್ತಿದ್ದ ತನ್ನನ್ನು ಆರೆಸ್ಸೆಸ್ ಕಾರ್ಯಕರ್ತರು ತಡೆದರು. ದೇವಸ್ಥಾನಕ್ಕೆ ಹೋಗದಂತೆ ತಡೆಯಲು ಅವರ್ಯಾರು ಎಂದು ರಾಹುಲ್ ಪ್ರಶ್ನಿಸಿದ್ದರು.

Comments are closed.