ರಾಷ್ಟ್ರೀಯ

ಪ್ರಧಾನಿಗೆ ಪತ್ರ ಬರೆದ ಕರ್ನಾಟಕದ ಗೋ ರಕ್ಷಾ ದಳ

Pinterest LinkedIn Tumblr

narendra-modi-2ನವದೆಹಲಿ: ಕರ್ನಾಟದ ಗೋರಕ್ಷಾ ದಳ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಗೋಹತ್ಯೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದೆ.

ಮಾಧ್ಯಮ ವರದಿಯೊಂದರ ಪ್ರಕಾರ, ಹಿಂದೂ ರಾಷ್ಟ್ರೀಯ ಸಂಘಟನೆ ಪ್ರಧಾನಿಗೆ ಗೋ ರಕ್ಷಣೆ ಬಗ್ಗೆ ಪತ್ರ ಬರೆದಿದ್ದು, ಗೋಹತ್ಯೆಗೆ ವಿಧಿಸಲಾಗುವ ಶಿಕ್ಷೆಯನ್ನು ಕಠಿಣಗೊಳಿಸಬೇಕೆಂದು ಮನವಿ ಮಾಡಿದ್ದು ಕೇಂದ್ರ ಸರ್ಕಾರ ಗೋಹತ್ಯಾ ನಿಷೇಧ ಜಾರಿ ಮಾಡಬೇಕು ಎಂದು ಒತ್ತಾಯಿಸಿದೆ.

ಪ್ರಧಾನಿ ನರೇಂದ್ರ ಮೋದಿ ತಮಗೆ ಸ್ವಯಂ ಘೋಷಿತ ಗೋ ರಕ್ಷಕರ ಬಗ್ಗೆ ಅಸಮಾಧಾನವಿದೆ ಎಂದು ಹೇಳಿದ ಬೆನ್ನಲ್ಲೇ ಕರ್ನಾಟಕದ ಗೋ ರಕ್ಷಾ ದಳ ಪ್ರಧಾನಿಗೆ ಪತ್ರ ಬರೆದಿದೆ. ಸ್ವಯಂ ಘೋಷಿತ ಗೋ ರಕ್ಷಕರ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು.

Comments are closed.