ಶಿಮ್ಲಾ/ ಜಮ್ಮು: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಮುಂದುವರೆದಿದ್ದು, ರಾಜಧಾನಿ ಶಿಮ್ಲಾದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯ ಪರಿಣಾಮವಾಗಿ ಖಾರಾ ಪಥರ್ ಸಮೀಪ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಕಳೆದ ಐದು ಗಂಟೆಗಳಿಂದ ವಾಹನಗಳು ನಿಂತಲ್ಲೇ ನಿಂತಿವೆ ಎಂದು ವರದಿಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸಂಭವಿಸಿದ ಭೂಕುಸಿತಗಳ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಅಮಾನತುಗೊಳಿಸಲಾಗಿದೆ. ಜಮ್ಮು-ಶ್ರೀನಗರ ಹೆದ್ದಾರಿಯಲ್ಲೂ ಹಲವಡೆ ಭೂಕುಸಿತಗಳು ಸಂಭವಿಸಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
Comments are closed.