ಪಟಿಯಾಲ: ನಕಲಿ ಗೋರಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಈಗ ಪಂಜಾಬ್ ನಲ್ಲಿ ಗೋ ರಕ್ಷಾ ದಳದ ಮುಖ್ಯಸ್ಥನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಗೋ ರಕ್ಷಣೆಯ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಗೋ ರಕ್ಷಾ ದಳದ ಮುಖ್ಯಸ್ಥ ಸತಿಶ್ ಕುಮಾರ್ ಅವರ ಪಂಜಾಬ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ವಿಡಿಯೋ ಕ್ಲಿಪ್ ನಲ್ಲಿ ಗೋ ರಕ್ಷಾ ದಳದ ಸದಸ್ಯರು ಜನರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳಿದ್ದು, ಅದನ್ನು ಆಧರಿಸಿ ಸತಿಶ್ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪಟಿಯಾಲ ಎಸ್ಎಸ್ ಪಿ ಗುರ್ಮಿತ್ ಚೌವ್ಹಾಣ್ ಅವರು ತಿಳಿಸಿದ್ದಾರೆ.
ಸತಿಶ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷೆನ್ 382, 384, 341, 148 ಹಾಗೂ 149 ಅಡಿ ಕೇಸ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ.
ಇನ್ನು ತಮ್ಮ ವಿರುದ್ಧ ಕೇಸ್ ದಾಖಲಾಗಿರುವ ಬಗ್ಗೆ ಹಾಗೂ ಪ್ರಧಾನಿ ಹೇಳಿಕೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸತಿಶ್ ಕುಮಾರ್, ಮೋದಿ ಹೇಳಿಕೆ ಹಿಂದೆ ವೋಟ್ ಬ್ಯಾಂಕ್ ರಾಜಕೀಯ ಇದೆ ಎಂದಿದ್ದಾರೆ.
ಪ್ರಧಾನಿ ಹೇಳಿಕೆ ರಾಜಕೀಯ ಪ್ರೇರಿತ, ಮುಂಬರುವ ಹಲವು ರಾಜ್ಯಗಳ ವಿಧಾನಸಭೆಯನ್ನು ಗಮನದಲ್ಲಿಟ್ಟುಕೊಂಡು ಮೋದಿ ಈ ಹೇಳಿಕೆ ನೀಡಿದ್ದಾರೆ ಎಂದು ಗೋ ರಕ್ಷಾ ದಳದ ಮುಖ್ಯಸ್ಥ ಆರೋಪಿಸಿದ್ದಾರೆ.
Comments are closed.