ರಾಷ್ಟ್ರೀಯ

ದಲಿತರ ಬದಲು ನನ್ನನ್ನು ಥಳಿಸಿ ಹೇಳಿಕೆ: ಪ್ರಧಾನಿ ಅಷ್ಟೊಂದು ಅಸಹಾಯಕರಾ? ಕಾಂಗ್ರೆಸ್ ಪ್ರಶ್ನೆ

Pinterest LinkedIn Tumblr

narendra-modi-2ನವದೆಹಲಿ: ಗೋರಕ್ಷಣೆಯ ಹೆಸರಿನಲ್ಲಿ ದಲಿತರನ್ನು ಥಳಿಸುವ ಬದಲು ನನನ್ನು ಥಳಿಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಪ್ರಧಾನಿ ಅಸಹಾಯಕರಾಗಿದ್ದಾರಾ ಎಂದು ಪ್ರಶ್ನಿಸಿದೆ.

ಗೋರಕ್ಷಣೆ ಹಾಗೂ ದಲಿತರ ಮೇಲಿನ ಹಲ್ಲೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನಕಲಿ ಗೋರಕ್ಷಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಾದ ನಂತರ ತೆಲಂಗಾಣದಲ್ಲೂ ನಕಲಿ ಗೋರಕ್ಷಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ, ಗೋ ರಕ್ಷಣೆಯ ಹೆಸರಿನಲ್ಲಿ ದಲಿತರನ್ನು ಥಳಿಸುವುದಕ್ಕೂ ಮುನ್ನ ತಮ್ಮನ್ನು ಥಳಿಸುವಂತೆ ಹೇಳಿದ್ದರು.

ಪ್ರಧಾನಿ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ಅಸಹಾಯಕತೆ ದಲಿತರ ಬದಲು ನನ್ನನ್ನು ಥಳಿಸಿ ಎಂಬ ಹೇಳಿಕೆ ನೀಡಿದ್ದಾರೆ. ದಲಿತರು, ಬಡವರ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಈಗ ಅವರನ್ನು ರಕ್ಷಿಸಲು ಪ್ರಧಾನಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಸಂಸತ್ ನಲ್ಲಿ ಹೇಳಿಕೆ ನೀಡಲಿ ಎಂದು ಆಗ್ರಹಿಸಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಸಂಸತ್ ನ ಹೊರಗೆ ಹೇಳಿಕೆ ನೀಡುವ ಮೂಲಕ ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Comments are closed.