ರಾಷ್ಟ್ರೀಯ

ಕಾಂಗ್ರೆಸ್‌ ಮುಖಂಡನ ಮೇಲೆ ಗುಂಡಿನ ದಾಳಿ

Pinterest LinkedIn Tumblr

yadagiriಹೈದರಾಬಾದ್: ತೆಲಂಗಾಣದ ಕಾಂಗ್ರೆಸ್ ಮುಖಂಡ ಯಾದಗಿರಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ.

ಎರಡು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು 6 ಸುತ್ತು ಗುಂಡು ಹಾರಿಸಿದ್ದಾರೆ. ಯಾದಗಿರಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಭೂ ವಿವಾದಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಡೆಕ್ಕನ್ ಬಾಬು ಮತ್ತು ಆತನ ಸಹಚರರು ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

Comments are closed.