ರಾಷ್ಟ್ರೀಯ

ಮುಲಾಯಂ ಅಖಿಲೇಶ್‌ರನ್ನು ಟೀಕಿಸುತ್ತಾರೆ ರಾಜೀನಾಮೆ ಪಡೆಯಲ್ಲ: ಬಿಜೆಪಿ ವ್ಯಂಗ್ಯ

Pinterest LinkedIn Tumblr

bjpಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪುತ್ರ ಅಖಿಲೇಶ್ ಯಾದವ್ ನೇತೃತ್ವದ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸುತ್ತಾರೆ. ಆದರೆ, ರಾಜೀನಾಮೆ ನೀಡುವಂತೆ ಆಗ್ರಹಿಸುವುದಿಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಂಪುಟದಲ್ಲಿ ಕೆಲವು ಸಚಿವರು ಭೂ ಕಬಳಿಕೆ ಮತ್ತು ಕಾನೂನುಬಾಹಿರ ಉದ್ಯಮಗಳಲ್ಲಿ ತೊಡಗಿದ್ದಾರೆ. ಅಂತಹ ಸಚಿವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕೆಲ ದಿನಗಳ ಹಿಂದೆ ಮುಲಾಯಂ ಒತ್ತಾಯಿಸಿದ್ದರು.

ಮುಲಾಯಂ ಸಿಂಗ್ ಬಹಿರಂಗವಾಗಿ ಹೇಳಿಕೆ ನೀಡುವುದು ನೋಡಿದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನವೇ ಸೋಲೋಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥನಾಥ್ ಸಿಂಗ್ ಮಾತನಾಡಿ, ಸಮಾಜವಾದಿ ಪಕ್ಷದ ಕೆಲ ಮುಖಂಡರು ಭೂಕಬಳಿಕೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜೀನಾಮೆ ನೀಡುವುದಾಗಿ ಮುಲಾಯಂ ಸಹೋದರ ಶಿವಪಾಲ್ ಯಾದವ್ ಬೆದರಿಕೆಯೊಡ್ಡಿರುವುದು ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, 2012ರಲ್ಲಿ ಪುತ್ರ ಅಖಿಲೇಶ್ ಯಾದವ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು ಐದು ಬಾರಿ ಸಾರ್ವಜನಿಕವಾಗಿ ತಮ್ಮ ಅತೃಪ್ತಿಯನ್ನು ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.ಇದೊಂದು ವಿಫಲ ಸರಕಾರ ಎಂದು ಯಾದವ್ ಕಿಡಿಕಾರಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಾವು ಮುಖ್ಯಮಂತ್ರಿಯಾಗುವುದಾಗಿ ಮತದಾರರಿಗೆ ಭರವಸೆ ನೀಡಿ ನಂತರ ಪುತ್ರನನ್ನು ಮುಖ್ಯಮಂತ್ರಿಯಾಗಿಸಿದ್ದಕ್ಕೆ ಮುಲಾಯಂ ಬಿಹಾರ್ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥನಾಥ್ ಸಿಂಗ್ ಎಂದು ಒತ್ತಾಯಿಸಿದ್ದಾರೆ.

Comments are closed.