ರಾಷ್ಟ್ರೀಯ

ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ, ಭದ್ರತೆ ವಿಷಯದಲ್ಲಿ ರಾಜಿ ಇಲ್ಲ: ಸರ್ವಪಕ್ಷ ನಿಯೋಗ ಸಭೆ

Pinterest LinkedIn Tumblr

J-K-all party meetನವದೆಹಲಿ: ಕೇಂದ್ರ ಸರ್ಕಾರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳು ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ ನಡೆಸಲು ಕ್ರಮ ಕೈಗೊಳ್ಳಬೇಕು ಆದರೆ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು ಎಂದು ಸರ್ವಪಕ್ಷ ನಿಯೋಗ ನಿರ್ಧರಿಸಿದೆ.
ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸರ್ವಪಕ್ಷ ಸದಸ್ಯ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಸದಸ್ಯರು ಸಾರ್ವಜನಿಕರು ಹಾಗೂ ವಿವಿಧ ರಾಜಕೀಯ ಪಕ್ಷ, ಸಂಘಟನೆಗಳೊಂದಿಗೆ ನಡೆಸಿದ ಚರ್ಚೆಯ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಪ್ರತಿಯೊಂದು ಸಂಘಟನೆ, ರಾಜಕೀಯ ಪಕ್ಷಗಳೊಂದಿಗೂ ಮಾತುಕತೆ ನಡೆಸಲು ಕೇಂದ್ರ ಸರ್ಕಾರ, ಕಾಶ್ಮೀರ ಸರ್ಕಾರ ಕ್ರಮ ಕೈಗೊಳ್ಳಬೇಕು, ಆದರೆ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಳ್ಳಲಾಗಿದೆ.

Comments are closed.