ರಾಷ್ಟ್ರೀಯ

ಒಡಿಶಾದಲ್ಲಿ ಸೇತುವೆಯಿಂದ ಉರುಳಿದ ಬಸ್, 21 ಸಾವು, 30 ಗಾಯ

Pinterest LinkedIn Tumblr

busಭುವನೇಶ್ವರ: ಒಡಿಶಾದ ಅನ್ಗುಲ್ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಗುರಿಳಿದ ಪರಿಣಾಮ 21 ಮಂದಿ ಸಾವನ್ನಪ್ಪಿದ್ದು 30 ಮಂದಿಗೆ ಗಂಭೀರ ಗಾಯಗಳಾಗಿವೆ.
ಬೋಧ್ ನಿಂದ ಅತಮಲಿಕ್ ಗೆ ತೆರಳುತ್ತಿದ್ದ ಬಸ್ ಡ್ಯೂಲಜೇರಿ ಎಂಬಲ್ಲಿ ಬಸ್ ಪುರುನಾ ಮನಿತ್ರಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಡಿಜಿಪಿ ಕೆಬಿ ಸಿಂಗ್ ಹೇಳಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 30 ಮಂದಿಯನ್ನು ಅತಮಲ್ಲಿಕ್ ಬಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅನ್ಗುಲ್ ಜಿಲ್ಲಾಧಿಕಾರಿ ಅನಿಲ್ ಕುಮಾರ್ ಸಮಾಲ್ ಹೇಳಿದ್ದಾರೆ.
ಅಪಘಾತ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಪಘಾತದಲ್ಲಿ ಗಾಯಗೊಂಡಿರುವವರಿಗೆ ಕೂಡಲೇ ಉಚಿತವಾಗಿ ವೈದ್ಯಕೀಯ ವ್ಯವಸ್ಥೆ ಒದಗಿಸುವಂತೆ ಆದೇಶಿಸಿದ್ದಾರೆ.

Comments are closed.