ರಾಷ್ಟ್ರೀಯ

ಸ್ನೇಹಿತರ ಎದುರೇ ಇಬ್ಬರು ಯುವತಿಯರ ಸಾಮೂಹಿಕ ಅತ್ಯಾಚಾರ

Pinterest LinkedIn Tumblr

delhi-rapeನವದೆಹಲಿ: ಇಬ್ಬರು ಯುವತಿಯರನ್ನು ಅವರ ಸ್ನೇಹಿತರ ಎದುರೇ ದುಷ್ಕರ್ಮಿಗಳ ಗುಂಪೊಂದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ದೆಹಲಿಯ ಅಮನ್‌ ವಿಹಾರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8.30ರ ಸುಮಾರಿಗೆ ಇಬ್ಬರು ಯುವತಿಯರು ತಮ್ಮ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಅವರನ್ನು ತಡೆದ ದುಷ್ಕರ್ಮಿಗಳ ಗುಂಪು ಯುವತಿಯರನ್ನು ಸಮೀಪದ ಮೈಟ್ರೊ ರೈಲುನಿಲ್ದಾಣದ ಬಳಿಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮುಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಯುವತಿಯರು ಪೋಷಕರ ಸಹಾಯದೊಂದಿಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಯುವತಿಯರ ವೈಧ್ಯಕೀಯ ತಪಾಸಣೆ ಬಳಿಕ ಅತ್ಯಾಚಾರ ನಡೆದಿರುವುದು ಸಾಬೀತಾಗಿದ್ದು, ಆರೋಪಿಗಳ ವಿರುದ್ಧ 323, 376 ಹಾಗೂ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.