ರಾಷ್ಟ್ರೀಯ

ಭಾರತ-ಪಾಕ್ ಗಡಿಯಲ್ಲಿ ಸ್ಮಾರ್ಟ್ ಬೇಲಿ!

Pinterest LinkedIn Tumblr

China-Border

ನವದೆಹಲಿ(ಸೆ.28): ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ 3,323 ಕಿಮೀ ಗಡಿ ಪ್ರದೇಶದ ಭದ್ರತೆಗೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಬೇಕೆಂಬ ಸಮಿತಿಯೊಂದರ ಸಲಹೆಗೆ ಭಾರತ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.

ಠಾಣ್ ಕೋಟ್ ವಾಯು ನೆಲೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಮಧುಕರ್ ಗುಪ್ತಾ ಅವರ ನೇತೃತ್ವದ ಸಮಿತಿ ರಚಿಸಿ, ಗಡಿಪ್ರದೇಶದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕೈಗೊಳ್ಳಬೇಕಿರುವ ಕ್ರಮಗಳಿಗೆ ಸಲಹೆ ನೀಡಲು ಸೂಚಿಸಿತ್ತು.

ಈಗ ಮಧುಕರ್ ಗುಪ್ತ ನೇತೃತ್ವದ ಸಮಿತಿ ಕೇಂದ್ರ ಸರ್ಕಾರಕ್ಕೆ ಒಂದಷ್ಟು ಶಿಫಾರಸುಗಳನ್ನು ನೀಡಿದ್ದು, ಇವುಗಳಿಗೆ ಸರ್ಕಾರ ತಾತ್ವಿಕ ಅನುಮೋದನೆಯನ್ನೂ ನೀಡಿದೆ. ಈ ಹಿನ್ನಲೆಯಲ್ಲಿ ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ. ಇದು ಗಡಿ ನುಸುಳುವಿಕೆಯನ್ನು ತಡೆಯಲು ಸಹಕಾರಿಯಾಗಲಿದೆ.

Comments are closed.