
ನವದೆಹಲಿ; ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಗಡಿಯಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ.
ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅವರಿಗೆ ಅನಾಮಧೇಯ ಬೆದರಿಕೆ ಕರೆಗಳು ಬರುತ್ತಿದ್ದು, ಕೂಡಲೇ ಭಾರತವನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳುವಂತೆ ಬೆದರಿಕೆಯನ್ನು ಒಡ್ಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ನಡೆಯುತ್ತಿದ್ದರೂ ಇಷ್ಟೂ ದಿನ ಸಹಿಸಿಕೊಂಡು ಧೃತಿಗೆಡದೆ ತಾಳ್ಮೆಯಿಂದ ವರ್ತಿಸುತ್ತಿದ್ದ ಭಾರತೀಯ ಸೇನೆ ಇದೀಗ ಉಗ್ರರ ವಿರುದ್ಧ ಸಿಡಿದೆದಿದ್ದು, ಗಡಿಯಲ್ಲಿರುವ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಪರಿಣಾಮ ಈ ವರೆಗೂ 39 ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಗಡಿಯಲ್ಲಿ ಈಗಲೂ ಬಿಗುವಿನ ವಾತಾವರಣ ಮುಂದುವರೆದಿದ್ದು, ಗುಂಡಿನ ಚಕಮಕಿ ಶಬ್ಧ ಕೇಳಿಬರುತ್ತಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
Comments are closed.