ನವದೆಹಲಿ: ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ಸ್ವಲ್ಪ ಇಳಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ 28 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‍ಗೆ 6 ಪೈಸೆ ಇಳಿಕೆಯಾಗಿದೆ.
ನೂತನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ನೋಡಿಕೊಂಡು ಭಾರತೀಯ ತೈಲ ಕಂಪೆನಿಗಳು ಪ್ರತಿ 15 ದಿನಗಳಿಗೊಮ್ಮೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತಿರುತ್ತವೆ.
ಸೆ.16ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 58 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 31 ಪೈಸೆ ಇಳಿಕೆಯಾಗಿತ್ತು. ನೂತನ ಪರಿಷ್ಕೃತ ದರದ ಅನ್ವಯ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 69.21 ರೂ. ಆಗಲಿದ್ದರೆ, ಡೀಸೆಲ್ ಬೆಲೆ 56.91 ರೂ. ಆಗಲಿದೆ.
Comments are closed.