ರಾಷ್ಟ್ರೀಯ

ಜಯಾಲಲಿತಾ ಆರೋಗ್ಯದ ವರದಿ ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ

Pinterest LinkedIn Tumblr

jaya

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ವರದಿ ಮತ್ತು ಅವರ ಫೋಟೊ ಬಹಿರಂಗ ಪಡಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮದ್ರಾಸ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಜಯಾ ಅವರ ಆರೋಗ್ಯ ಸ್ಥಿತಿ ಬಗ್ಗೆ ಹಲವಾರು ವದಂತಿಗಳು ಕೇಳಿ ಬರುತ್ತಿವೆ. ಆದ್ದರಿಂದ ಜಯಾ ಅವರ ಆರೋಗ್ಯ ಹೇಗಿದೆ? ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಾ ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಈ ಮಾಹಿತಿಗಳನ್ನು ಬಹಿರಂಗ ಪಡಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ‘ಟ್ರಾಫಿಕ್’ ರಾಮಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಮತ್ತು ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಜಯಲಲಿತಾ ಅವರನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇವರು ಜಯಾ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಅರ್ಜಿಯ ವಿಚಾರಣೆ ಮಂಗಳವಾರ ನಡೆಯುವ ಸಾಧ್ಯತೆಯಿದೆ ಎಂದು ಬಲ್ಲಮೂಲಗಳು ತಿಳಿಸಿವೆ.

Comments are closed.