ರಾಷ್ಟ್ರೀಯ

ರೋಹಿತ್‌ ವೇಮುಲ್‌ ಆತ್ಮಹತ್ಯೆ ವೈಯಕ್ತಿಕ: ತನಿಖಾ ವರದಿ

Pinterest LinkedIn Tumblr

Rohith

ನವದೆಹಲಿ: ಹೈದರಾಬಾದ್‌ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್‌ ವೇಮುಲ್‌ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ.

ಪ್ರಕರಣ ಸಂಬಂಧ ನ್ಯಾಯಮೂರ್ತಿ ರೂಪಾನ್‌ವಾಲ್‌ ಕಮಿಷನ್‌ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಕ್ಕೆ ವರದಿ ಸಲ್ಲಿಸಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಬಂಡಾರು ದತ್ತಾತ್ರೇಯ ಅವರಿಗೆ ಕ್ಲೀನ್‌ ಚೀಟ್‌ ನೀಡಿದೆ ಎಂದು ಮೂಲಗಳು ತಿಳಿಸಿವೆ.

ರೋಹಿತ್‌ ವೇಮುಲ್‌ ಅವರ ತಾಯಿ ವಿ. ರಾಧಿಕಾ ಅವರು ’ಮಾಲಾ’ ಸ‌ಮುದಾಯಕ್ಕೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ. ಆದರೆ ಅದಕ್ಕೆ ಯಾವುದೇ ದಾಖಲೆ, ಸಾಕ್ಷಾಧಾರಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

Comments are closed.