ರಾಷ್ಟ್ರೀಯ

ಮೋದಿ ರಕ್ತದ ದಲ್ಲಾಳಿ ಕೆಲಸ ಮಾಡುತ್ತಿದ್ದು, ಸೇನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ: ರಾಹುಲ್ ಗಾಂಧಿ

Pinterest LinkedIn Tumblr

rahul-modi-759

ನವದೆಹಲಿ: ಸೇನಾ ಪಡೆ ಪಿಒಕೆಯಲ್ಲಿ ನಡೆಸಿದ ಸೀಮಿತ ದಾಳಿ ವಿಷಯದ ಬಗ್ಗೆ ಮಾತನಾಡಿ ಪ್ರಧಾನಿ ಮೋದಿ ರಕ್ತದ ದಲ್ಲಾಳಿ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ಸೇನೆಯನ್ನು ರಾಜಕೀಯಗೊಳಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ, ಆದರೆ ಸೇನಾ ಕಾರ್ಯಾಚರಣೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದನ್ನು ಒಪ್ಪುವುದಿಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಭಿನಂದಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಅ.6 ರಂದು ಮಾತನಾಡಿದ್ದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸೇನಾ ಕಾರ್ಯಾಚರಣೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದು ರಕ್ತದ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ರಾಹುಲ್ ಗಾಂಧಿ, ಸೇನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

Comments are closed.