ರಾಷ್ಟ್ರೀಯ

ಇಡಿಯ ಕಾಶ್ಮೀರ ನಮ್ಮದು: ಭಾಗವತ್

Pinterest LinkedIn Tumblr

mohan-bhagatನಾಗಪುರ (ಅ.11): ಪಾಕಿಸ್ತಾನವು ಕಾಶ್ಮೀರ ಕಣಿವೆಯಲ್ಲಿ ಹಿಂಸೆಯನ್ನು ಪ್ರಚೋದಿಸುತ್ತಿದೆ ಎಂದಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಗಿಲ್ಗಿಟ್-ಬಾಲಿಸ್ತಾನ್’ಗಳನ್ನು ಒಳಗೊಂಡಂತೆ ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ವಿಜಯದಶಮಿ ದಿನದಂದು ಸಂಘದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಭಾಗವತ್, ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನವು ಹೊಣೆಯೆಂಬುವುದು ಇಡಿ ಜಗತ್ತಿಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಭಾರತವು ಪ್ರಗತಿ ಹೊಂದುತ್ತಿದೆ. ಕೆಲವು ದೇಶಗಳಿಗೆ ಈ ಪ್ರಗತಿಯನ್ನು ಸಹಿಸಲಾಗುತ್ತಿಲ್ಲ. ಕಾಶ್ಮೀರವು ಗಂಭೀರವಾದ ವಿಷಯ, ಹಾಗೂ ಅದು ಭಾರತದ ಅವಿಭಾಜ್ಯ ಅಂಗವಾಗಿದೆ, ಎಂದು ಭಾಗವತ್ ಹೇಳಿದ್ದಾರೆ.
ಕಾಶ್ಮೀರದಲ್ಲಿ ಹಿಂಸೆಯನ್ನು ಪ್ರಚೋದಿಸುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಭಾಗವತ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Comments are closed.