ರಾಷ್ಟ್ರೀಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್; 17 ಮಂದಿ ಸಾವು

Pinterest LinkedIn Tumblr

bus1

ಭೋಪಾಲ್: ಸುಮಾರು 40 ಜನರು ಪ್ರಯಾಣಿಸುತ್ತಿದ್ದ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯ ಪ್ರದೇಶದಲ್ಲಿ ನಡೆದಿದೆ.

bus

ಮಧ್ಯಪ್ರದೇಶದ ರತ್ಲಮ್ ಜಿಲ್ಲೆಯಿಂದ ಮಂಡ್ಸೌರ್ ಗೆ ಪ್ರಯಾಣಿಸುತ್ತಿದ್ದ ಬಸ್ ಮಾರ್ಗ ಮಧ್ಯೆ ಕಂದಕಕ್ಕೆ ಉರುಳಿದೆ. ಬೆಳಗ್ಗೆ ಸುಮಾರು 10.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ 17 ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ.

ಪ್ರತ್ಯಕ್ಷ ದರ್ಶಿಗಳು ತಿಳಿಸಿರುವಂತೆ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಮಮತಾ ಬಸ್ ಸರ್ವಿಸ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ದುರ್ಘಟನೆಯಲ್ಲಿ ಹಲವು ಮಂದಿ ನಾಪತ್ತೆಯಾಗಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.