ರಾಷ್ಟ್ರೀಯ

ಸಾಮಾಜಿಕ ತಾಣದಲ್ಲಿ ಜಯಾಲಲಿತಾ ಅನಾರೋಗ್ಯ ಕುರಿತು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ

Pinterest LinkedIn Tumblr

jayalalitha-mariyappanಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಇಲ್ಲಿಯವರೆಗೆ ಅವರ ಪಕ್ಷವಾಗಲೀ, ಚಿಕಿತ್ಸೆ ನೀಡುತ್ತಿರುವ ವೈದ್ಯರಾಗಲೀ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ. ಆದರೆ ಜಯಾ ಅನಾರೋಗ್ಯದ ಬಗ್ಗೆ ಸಾಮಾಜಿಕ ತಾಣಗಳಲ್ಲಿ ವದಂತಿ ಹಬ್ಬಿಸುವವರ ಮೇಲೆ ಪೊಲೀಸರು ಮತ್ತು ಸೈಬರ್ ತಜ್ಞರು ನಿಗಾ ಇರಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ಜಯಾ ಅನಾರೋಗ್ಯದ ಬಗ್ಗೆ ವದಂತಿ ಹಬ್ಬಿಸಿದವರ ವಿರುದ್ಧ 50 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಕೊಯಂಬತ್ತೂರಿನ ಬ್ಯಾಂಕ್ ಉದ್ಯೋಗಿಗಳಾಗಿದ್ದಾರೆ.

ಈ ವ್ಯಕ್ತಿಗಳು ಬ್ಯಾಂಕ್‍ಗೆ ಆಗಮಿಸಿದ್ದ ಜಯಲಲಿತಾ ಅವರ ಪಕ್ಷದ ಕಾರ್ಯಕರ್ತರಲ್ಲಿ ಜಯಾ ಆರೋಗ್ಯದ ಬಗ್ಗೆ ವಿಚಾರಿಸಿ ಆಮೇಲೆ ವದಂತಿ ಹಬ್ಬಿಸಿದ್ದರು.

ಸಾಮಾಜಿಕ ತಾಣದಲ್ಲಿ ಜಯಾ ಅನಾರೋಗ್ಯದ ಬಗ್ಗೆ ಯಾವುದೇ ರೀತಿಯ ಸುಳ್ಳು ಸುದ್ದಿ, ವದಂತಿಗಳನ್ನು ಹಬ್ಬಿಸಬಾರದು. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವ ಪೋಸ್ಟ್ ಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪ್ಪಿತಸ್ಥರಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Comments are closed.