ನವದೆಹಲಿ: ಅಸ್ಸಾಂ ಮತ್ತು ದೆಹಲಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿ ಪಾಠ ಕಲಿತಿರುವ ಬಿಜೆಪಿ ಇದೀಗ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನೆ ಅವಲಂಬಿಸಲು ನಿರ್ಧರಿಸಿದೆ.
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ನಂತರ ನರೇಂದ್ರ ಮೋದಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದ್ದು, ಸಾರ್ವಜನಿಕ ಸಭೆಗಳಲ್ಲಿ 2014ರ ಲೋಕಸಭೆ ಚುನಾವಣೆಯ ರೀತಿ ಜನ ಮೋದಿ ಹೆಸರಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಕಾನ್ಪುರ ಬಿಜೆಪಿ ಸಂಸದ ದೇವೇಂದ್ರ ಸಿಂಗ್ ಭೋಲೆ ಅವರು ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನೇ ಪ್ರಮುಖವಾಗಿ ಬಿಂಬಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ,
ಪ್ರಬಲ ಆಡಳಿತಾತ್ಮಕ ಅನುಭವ ಹೊಂದಿರುವ ಬಿಎಸ್ಪಿಯ ಮಾಯಾವತಿ ಹಾಗೂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರೇ ಬಿಜೆಪಿಗೆ ಪ್ರಮುಖ ಸವಾಲಾಗಿದ್ದು, ಕೇಂದ್ರದ ಸಾಧನೆಗಳ ಮೂಲಕ ಇವರನ್ನು ಎದುರಿಸಬೇಕು ಎಂದು ಪಕ್ಷದ ಚುನಾವಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂತ್ವ ಘೋಷಣೆ ತುಂಬಾ ಹಳೆಯದಾಗಿದ್ದು, ಅದು ಉತ್ತರ ಪ್ರದೇಶ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ. ಹೀಗಾಗಿ ಮೋದಿಯ ರಾಷ್ಟ್ರೀಯ ವಾದ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಕೆಲಸ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಮೋದಿಯೇ ಗೆಲುವಿನ ಮಂತ್ರವಾಗಿದ್ದು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಬಗ್ಗೆ ಯೋಚನೆ ಮಾಡಬೇಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಹ ಗೊರಖಪುರ ಸಂಸದ ಯೋಗಿ ಆದಿತ್ಯನಾಥ್ ಅವರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ
Comments are closed.