ಮಂಡಿ (ಅ.19): ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿ ಕಾರ್ಯಾಚರಣೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ಈಗ ಇಡೀ ವಿಶ್ವವೇ ನಮ್ಮ ಸೈನಿಕರ ಬಗ್ಗೆ ಮಾತನಾಡುತ್ತಿದೆ. ನಮ್ಮ ಸೈನಿಕರು ಯಾರಿಗೂ ಕಮ್ಮಿ ಇಲ್ಲ ಎನ್ನುವುದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಹಿಂದೆ ಇಸ್ರೇಲ್ ಇಂತಹ ದಾಳಿ ಮಾಡುತ್ತಿತ್ತು. ಈಗ ಭಾರತ ಮಾಡಿ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಟ್ಟಿದೆ’ ಎಂದು ಹೇಳಿದ್ದಾರೆ.