ರಾಷ್ಟ್ರೀಯ

ದೀಪಾವಳಿಯಂದು ಜಯಲಲಿತಾ ಡಿಸ್ಚಾರ್ಜ್

Pinterest LinkedIn Tumblr

jayalalitha-mariyappanಚೆನ್ನೈ: ತಮಿಳುನಾಡಿನ ಅಮ್ಮಾ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ದೀಪಾವಳಿಯಂದು ತಮಿಳುನಾಡು ಸಿಎಂ ಜಯಲಲಿತಾ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಅಪೋಲೋ ಆಸ್ಪತ್ರೆಯ ಉನ್ನತ ಮೂಲಗಳು ತಿಳಿಸಿವೆ. ಡಿಸ್ಚಾರ್ಜ್ ಆದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಲಂಡನ್‍ಗೆ ತೆರಳಲಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.

ಸೆ.22 ರಿಂದ ಸಿಎಂ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವೈದ್ಯರು ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಜಯಾ ಆರೋಗ್ಯದ ಮಾಹಿತಿಯನ್ನು ನೀಡುತ್ತಿದ್ದಾರೆ.

ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅವರ ಬಳಿಯಿದ್ದ ಎಲ್ಲ ಖಾತೆಗಳನ್ನು ಹಣಕಾಸು ಸಚಿವ ಪನ್ನೀರ್ ಸೆಲ್ವಂ ಈಗ ನೋಡಿಕೊಳ್ಳುತ್ತಿದ್ದಾರೆ.

Comments are closed.