ರಾಷ್ಟ್ರೀಯ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್ ಅರ್ಜಿ ವಜಾ

Pinterest LinkedIn Tumblr

aravind-kejriwalನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ) ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ವಿರುದ್ಧ ಕೇಜ್ರಿವಾಲ್ ಮಾಡಿದ್ದ ಭ್ರಷ್ಟಾಚಾರ ಆರೋಪ ಸಂಬಂಧ ಪಟಿಯಾಲ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಎಎಪಿ ಐವರು ಮುಖಂಡರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಆರೋಪ ಮಾಡಿದ್ದಾರೆ ಎಂದು ಅರುಣ್ ಜೇಟ್ಲಿ ಅವರು ಮೊಕದ್ದಮೆ ದಾಖಲಿಸಿದ್ದರು. ಕೇಜ್ರಿವಾಲ್ ಸೇರಿದಂತೆ ಕುಮಾರ್ ವಿಶ್ವಾಸ್, ಸಂತೋಷ್ ಸಿಂಗ್, ರಾಘವ ಛಡ್ಡಾ ಮತ್ತು ದೀಪಕ್ ವಾಜಪೇಯಿ ವಿರುದ್ಧ ದೂರು ದಾಖಲಾಗಿದೆ.

Comments are closed.