ರಾಷ್ಟ್ರೀಯ

ಜಮ್ಮು-ಕಾಶ್ಮೀರ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕ್

Pinterest LinkedIn Tumblr

ind

ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಬಳಿಕ ಭಾರತದ ಮೇಲೆ ಹಗೆ ಸಾಧಿಸುತ್ತಿರುವ ಪಾಕಿಸ್ತಾನ, ಗಡಿಯಲ್ಲಿ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ.

ಸೀಮಿತ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾರತೀಯ ಯೋಧರ ಕಣ್ಣು ತಪ್ಪಿಸಲು ಯತ್ನಿಸುತ್ತಿರುವ ಪಾಕಿಸ್ತಾನ ಉಗ್ರರು ಗಡಿ ನುಸುಳಲು ಪ್ರತೀನಿತ್ಯ ಯತ್ನ ನಡೆಸುತ್ತಲೇ ಇದ್ದಾರೆ.

ಒಂದೆಡೆ ಉಗ್ರರು ದಾಳಿಗಳು ಯೋಧರಿಗೆ ತಲೆನೋವಾಗಿ ಪರಿಣಮಿಸಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಸೇನೆ ಕೂಡ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಸೀಮಿತ ದಾಳಿ ಬಳಿಕ ಈ ವರೆಗೂ ಪಾಕಿಸ್ತಾನ ಸೇನೆ 31 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಂದು ಬೆಳಿಗ್ಗೆ 3.30ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲೂ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ.

ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ಮಾತನಾಡಿ, ಭೀಮ್ಬರ್ ಘಳಿ ಸೆಕ್ಟರ್ ನ ಎಲ್ಒಸಿ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದೆ. ಸೇನಾ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ಶೆಲ್ ಗಳ ದಾಳಿಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದಲ್ಲದೆ ನಿನ್ನೆ ಕೂಡ ಪಾಕಿಸ್ತಾನ ಸೇನೆ ರಜೌರಿ-ಪೂಂಜ್ ಸೆಕ್ಟರ್ ಬಳಿಯೂ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಭಾರತೀಯ ಸೇನೆ ಮೇಲೆ ಶೆಲ್ ಗಳು ಹಾಗೂ ಸ್ವಯಂ ಚಾಲಿತ ಗನ್ ಗಳನ್ನು ಬಳಸಿ ದಾಳಿ ಮಾಡಿತ್ತು.

Comments are closed.