ರಾಷ್ಟ್ರೀಯ

ಪಾಕ್ ಗುಂಡಿನ ದಾಳಿಗೆ ಗಾಯಗೊಂಡಿದ್ದ ಬಿಎಸ್ಎಫ್ ಯೋಧ ಗುರ್ನಾಮ್ ಸಿಂಗ್ ಹುತಾತ್ಮ

Pinterest LinkedIn Tumblr

gurnam-singh

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಬಿಎಸ್ಎಫ್ ಯೋಧ ಗುರ್ನಾಮ್ ಸಿಂಗ್ (26) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಗಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ವೇಳೆ ಪಾಕಿಸ್ತಾನ ಸೈನಿಕರು ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದರು. ದಾಳಿ ವೇಳೆ ಗುರ್ನಾಮ್ ಸಿಂಗ್ ಅವರ ತಲೆಗೆ ಗುಂಡು ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಮ್ಮುವಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ 11.55ರ ಸುಮಾರಿಗೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಗುರ್ನಾಮ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ಹಾಗೂ ವಿದೇಶಿ ತಜ್ಞರಿಂದ ಚಿಕಿತ್ಸೆ ಕೊಡಿಸಬೇಕೆಂದು ಈ ಹಿಂದಷ್ಟೇ ಕುಟುಂಬ ಸದಸ್ಯರು ಒತ್ತಾಯಿಸಿದ್ದರು.

ಅ.20ರಂದು ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುರ್ನಾಮ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದರು. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಓರ್ವ ಉಗ್ರ ಸೇರಿದಂತೆ 7 ಸೈನಿಕರನ್ನು ಹತ್ಯೆ ಮಾಡಿತ್ತು.

Comments are closed.