ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಮಾಹಾಮೈತ್ರಿಯನ್ನು ತಳ್ಳಿಹಾಕಿದ ಕಾಂಗ್ರೆಸ್

Pinterest LinkedIn Tumblr

congress-3ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಾಮೈತ್ರಿಯ ಸಾಧ್ಯತೆಯನ್ನು ಕಾಂಗ್ರೆಸ್ ಸ್ಪಷ್ಟವಾಗಿ ನಿರಾಕಾರಿಸಿದೆ. ಮಹಾಮೈತ್ರಿಯ ಸಾಧ್ಯತೆಗಳ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲ, ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯದ ರಾಜ್ಯದಲ್ಲಿ ಎಲ್ಲವನ್ನು ಸರಿ ಮಾಡಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತ ಇಲ್ಲದೇ ಇರುವ ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಸರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಮಾಜವಾದಿ ಪಕ್ಷ ಸೇರಿದಂತೆ ಯಾವುದೇ ಪಕ್ಷದೊಂದಿಗೂ ಮಹಾಮೈತ್ರಿಗೆ ಮುಂದಾಗುವುದಿಲ್ಲ ಎಂದು ರಣ್ ದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ವಿಷಯದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್, ಬಿಜೆಪಿ, ಎಸ್ ಪಿ ಬಿಎಸ್ ಪಿ ಪಕ್ಷಗಳು ಯತ್ನಿಸುತ್ತಿವೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಯು, ಆರ್ ಜೆಡಿ ಪಕ್ಷಗಳು ಬಿಜೆಪಿ ವಿರುದ್ಧ ಮಹಾ ಮೈತ್ರಿ ಮಾಡಿಕೊಂಡು ಆಡಳಿತ ಚುಕ್ಕಾಣಿ ಹಿಡಿದಿದ್ದವು. ಇದೆ ಮಾದರಿಯಲ್ಲಿ ಉತ್ತರಪ್ರದೇಶದಲ್ಲೂ ಸಹ ಬಿಜೆಪಿ ವಿರುದ್ಧ ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿ ರಚನೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿತ್ತು.

Comments are closed.