ರಾಷ್ಟ್ರೀಯ

ವಡೊದರ ಪಟಾಕಿ ಅಂಗಡಿಗೆ ಬೆಂಕಿ, 8 ಸಾವು

Pinterest LinkedIn Tumblr

vadodarವಡೊದರ: ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಸಂಜೆ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟಾಕಿ ಅಂಗಡಿಗೆ ಹೊಂದಿಕೊಂಡಿದ್ದ ಇತರೆ ಎರಡು ಅಂಗಡಿಗಳು ಸಹ ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.