ರಾಷ್ಟ್ರೀಯ

ಟ್ಯೂಶನ್‌ಗೆ ಬರುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ಬಂಧನ

Pinterest LinkedIn Tumblr

Rape-on-Girl-700

ಕೊಚ್ಚಿ: ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ 56 ವರ್ಷ ವಯಸ್ಸಿನ ಶಿಕ್ಷಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಶಿಕ್ಷಕ ಸುರೇಶ್, ಕೋದಾಮಂಗಲಂನಲ್ಲಿರುವ ಸಿರಿಯನ್ ಜಾಕೋಬೈಟ್ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಟ್ಯೂಶನ್ ತೆಗೆದುಕೊಳ್ಳುತ್ತಿದ್ದನು ಎನ್ನಲಾಗಿದೆ.

ಕಳೆದ ಎರಡು ವರ್ಷಗಳಿಂದ ಆರೋಪಿ ಸುರೇಶ್, ಟ್ಯೂಶನ್‌ಗೆ ಬರುತ್ತಿದ್ದ ಪಕ್ಕದ ಮನೆಯ 16 ವರ್ಷ ವಯಸ್ಸಿನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುರೇಶ್ ವಿರುದ್ಧ ಅನೈಸರ್ಗಿಕ ಲೈಂಗಿಕ ಕ್ರಿಯೆ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದ್ದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Comments are closed.