ರಾಷ್ಟ್ರೀಯ

ನ್ಯಾಯಾಧೀಶರ ದೂರವಾಣಿ ಕದ್ದಾಲಿಕೆ; ಕೇಜ್ರಿವಾಲ್

Pinterest LinkedIn Tumblr

kejrivalನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪಕ್ಕೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಹೈಕೋರ್ಟ್‍ನ 50ನೇ ವರ್ಷದ ಕಾರ್ಯಕ್ರಮದಲ್ಲಿ ಮಾತನಾಡಿ ಕೇಜ್ರಿವಾಲ್, ಜಡ್ಜ್‍ಗಳ ದೂರವಾಣಿಯನ್ನು ಕದ್ದಾಲಿಸಲಾಗುತ್ತಿದೆ ಎನ್ನುವ ವಿಷಯ ನನ್ನ ಕಿವಿಗೆ ಬಿದ್ದಿದೆ. ಹೀಗಾಗಿ ಅವರು ಮಾತನಾಡಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಕಳೆದ 2 ವರ್ಷಗಳಿಂದ ಸಚಿವನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಈ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು, ಭಾರತದಲ್ಲಿ ಜಡ್ಜ್‍ಗಳ ಕರೆಯನ್ನು ಕದ್ದಲಿಕೆಯಾಗುತ್ತಿಲ್ಲ. ಕೇಜ್ರಿವಲಾರ್ ಆರೋಪವನ್ನು ನಾನು ಸಂಪೂರ್ಣವಾಗಿ ತಳ್ಳಿ ಹಾಕುತ್ತೇನೆ ಎಂದು ರವಿಶಂಕರ್ ಪ್ರಸಾದ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಟಿಎಸ್ ಠಾಕೂರ್ ಉಪಸ್ಥಿತರಿದ್ದರು. ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಪ್ರತಿಕ್ರಿಯಿಸಿ, ಕೇಜ್ರಿವಾಲರ್ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಶುಕ್ರವಾರ ನ್ಯಾಯಾಧೀಶರ ನೇಮಕದಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದಕ್ಕೆ ಟಿಎಸ್ ಠಾಕೂರ್ ನೀವು ಇಡೀ ನ್ಯಾಯಾಂಗ ವ್ಯವಸ್ಥೆಗೆ ಬೀಗ ಹಾಕಬೇಕು ಎಂದು ಯೋಚಿಸಿದ್ದೀರಾ ಎಂದು ಕೇಂದ್ರವನ್ನು ಪ್ರಶ್ನಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದರು.

Comments are closed.