ರಾಷ್ಟ್ರೀಯ

ದೆಹಲಿಯಲ್ಲಿ ಅಗ್ನಿ ಆಕಸ್ಮಿಕ ಮೂವರ ಸಾವು

Pinterest LinkedIn Tumblr

articleನವದೆಹಲಿ: ಇಲ್ಲಿನ ಬಹುಮಹಡಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಜೀವವಾಗಿ ದಹನಗೊಂಡಿರುವ ಘಟನೆ ಬುಧವಾರ ನಡೆದಿದೆ.

ಈಶಾನ್ಯ ದೆಹಲಿಯ ಶಾಹಾರ ಪ್ರದೇಶದಲ್ಲಿರುವ ಮೋಹನಾ ಪಾರ್ಕ್‌ ಸಮೀಪದಲ್ಲಿರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿದ್ದರಿಂದ ಕಟ್ಟಡದಿಂದ ಹೊರ ಬರಲಾಗದೇ ಮೂವರು ಸಜೀವವಾಗಿ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿಗಳು 8 ಜನರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ 7 ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Comments are closed.