ಪಾಟ್ನಾ: ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್, ಬಿಎಸ್ ಪಿ ನಾಯಕಿ ಮಾಯಾವತಿ ಬಳಿಕ ಈಗ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ಸಿಮಿ ಉಗ್ರರ ಎನ್ ಕೌಂಟರ್ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಭೋಪಾಲ್ ನಲ್ಲಿ ನಡೆದ ಎನ್ ಕೌಟರ್ ಬಗ್ಗೆ ಹಲವು ಪ್ರಶ್ನೆಗಳು ಎದ್ದಿರುವುದರಿಂದ ಈ ಬಗ್ಗೆ ಮಧ್ಯಪ್ರದೇಶ ಸರ್ಕಾರ ಸ್ವತಂತ್ರ ಸಂಸ್ಥೆಯ ಮೂಲಕ ತನಿಖೆ ನಡೆಸಲೇಬೇಕು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ. ಎನ್ ಕೌಂಟರ್ ಪ್ರಕರಣದ ಬಗ್ಗೆ ಹಲವು ಪ್ರಶ್ನೆಗಳು ಉತ್ತರ ಸಿಗದೇ ಉಳಿದಿವೆ, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇದಕ್ಕೂ ಮುನ್ನ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಬಿಎಸ್ ಪಿ ನಾಯಕಿ ಮಾಯಾವತಿ ಸೇರಿದಂತೆ ಹಲವಾರು ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಕ್ಕೆ ಒತ್ತಾಯಿಸಿದ್ದರು.