ರಾಷ್ಟ್ರೀಯ

ಮನೆಯಲ್ಲಿದ್ದ ವಸ್ತುಗಳನ್ನು ಕೊಳ್ಳೆ ಹೊಡೆದು ಆನಂತರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ದರೋಡೆಕೋರರು

Pinterest LinkedIn Tumblr

Gang-Rape

ಗ್ರೇಟರ್ ನೋಯ್ಡಾ: ಮೂರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ದರೋಡೆಕೋರರು ಅವರ ಮನೆಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಕಾರೋಲಿ ಗ್ರಾಮದಲ್ಲಿ ನಡೆದಿದೆ.

ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುವ ಮಹಿಳೆಯರ ಮನೆಗೆ ಮಂಗಳವಾರ ಮಧ್ಯರಾತ್ರಿ ಸುಮಾರು 12.30ಕ್ಕೆ ನುಗ್ಗಿದ ದರೋಡೆಕೋರರು ಮೊದಲು ಮನೆಯಲ್ಲಿದ್ದ ವಸ್ತುಗಳನ್ನು ಕೊಳ್ಳೆ ಹೊಡೆದು ಆನಂತರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಎಫ್ ಐ ಆರ್ ದಾಖಲಾಗಿದ್ದು, ಸಂತ್ರಸ್ತರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಗ್ರೇಟರ್ ನೋಯ್ಡಾ ಎಸ್ ಪಿ ಸುಜಾತಾ ಸಿಂಗ್ ತಿಳಿಸಿದ್ದಾರೆ.

Comments are closed.