ನವದೆಹಲಿ: ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು ಗುರುವಾರ ಹೇಳಿದ್ದಾರೆ.
ಈ ಹಿಂದಷ್ಟೇ ರಾಮ್ ಕಿಶನ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡ ಯೋಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು ಎಂದು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು, ರಾಷ್ಟ್ರೀಯ ಚುನಾವಣೆಗಳಿಗೂ ಪಂಚಾಯಿತಿ ಚುನಾವಣೆಗೂ ಸಾಕಷ್ಟು ವ್ಯತ್ಯಾಸಗಳಿವೆ. ನನ್ನ ತಂದೆ ಯಾವುದೇ ಪಕ್ಷಕ್ಕೂ ಸೇರಿರಲಿಲ್ಲ. ನನ್ನ ತಂದೆ ಜನರಿಗಾಗಿ ಕೆಲಸವನ್ನು ಮಾಡುತ್ತಿದ್ದರು. ನನ್ನ ತಂದೆ ಕುಟುಂಬಕ್ಕಾಗಿ ಅಲ್ಲದೆ, ಅವರ ಸಹೋದ್ಯೋಗಿಗಳಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆಂದು ಹೇಳಿದ್ದಾರೆ.
ರಾಷ್ಟ್ರೀಯ
Comments are closed.