ರಾಷ್ಟ್ರೀಯ

ರಾಹುಲ್ ‘ಕಾಮಿಡ್ ಸರ್ಕಸ್’ ಹೀರೋ: ಬಿಜೆಪಿ

Pinterest LinkedIn Tumblr

kailash-vijayvargiyaನವದೆಹಲಿ: ಮಾಜಿ ಯೋಧನ ಆತ್ಮಹತ್ಯೆ ಪ್ರಕರಣವನ್ನಿಡಿದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕಾಮಿಡಿ ಸರ್ಕಸ್ ನ ಹೀರೋದಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಗುರುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ಸಮಾನ ವೇತನ ಮತ್ತು ಸಮಾನ ಪಿಂಚಣಿಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದರು. ಆದರೂ, ಆವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಯೋಧನ ಆತ್ಮಹತ್ಯೆಯ ಹಿಂದಿರುವ ಕಾರಣವನ್ನು ಕಂಡುಹಿಡಿಯಬೇಕಿದೆ ಎಂದು ಹೇಳಿದ್ದಾರೆ.
ಸಮಾನ ವೇತನ ಮತ್ತು ಸಮಾನ ಪಿಂಚಣಿ ಯೋಜನೆಗಾಗಿ ಸರ್ಕಾರ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡುತ್ತಿದೆ. ಈ ಬಗ್ಗೆ ರಕ್ಷಣಾ ಸಚಿವರು ದಾಖಲೆಗಳನ್ನು ನೀಡಿದ್ದಾರೆ. ರಾಮ್ ಕಿಶನ್ ಅವರು ಯೋಜನೆಯ ಫಲವನ್ನು ಪಡೆದುಕೊಂಡಿದ್ದು, ಮೊದಲು ಆತ್ಮಹತ್ಯೆಯ ಹಿಂದಿನ ಸತ್ಯವನ್ನು ಕಂಡುಹಿಡಿಯಬೇಕಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚಸ್ಸಿನ ಕುರಿತಂತೆ ಕೆಲವರಿಗೆ ಸಮಸ್ಯೆಯುಂಟಾದಂತಿದೆ. ಹೀಗಾಗಿ ಅವರ ಗೌರವವನ್ನು ಹಾಳು ಮಾಡುವ ಸಲುವಾಗಿ ಈ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

Comments are closed.