ರಾಷ್ಟ್ರೀಯ

ಸೀಮಿತ ದಾಳಿ ಬಳಿಕ ಪಾಕ್ ಸೇನೆ 99 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ: ಸೇನೆ

Pinterest LinkedIn Tumblr

indian-armyನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಸೇನೆ ಈ ವರೆಗೂ 99 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ ಭಾರತೀಯ ಸೇನೆ ಶುಕ್ರವಾರ ಮಾಹಿತಿ ನೀಡಿದೆ.
ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಇ ನಡೆಸಿದ ಬಳಿಕ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ಈ ವರೆಗೂ 99 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಅಲ್ಲದೆ, ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
ಜಮ್ಮುವಿನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ 83 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, 16 ಬಾಕಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ನವೆಂಬರ್ 1ರ ಬಳಿಕ ನಾಗರಿಕ ಪ್ರದೇಶಗಳನ್ನು ಗುರಿ ಮಾಡಿಕೊಂಡ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿತ್ತು.
ದಾಳಿಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದರು. ಅಂತರಾಷ್ಟ್ರೀಯ ಗಡಿಯಲ್ಲಿ ನಡೆದ ಅಪ್ರಚೋದಿತ ಗುಂಡಿನ ದಾಳಿಗೆ 22 ಮಂದಿ ಗಾಯಗೊಂಡಿದ್ದರು. ಪಾಕಿಸ್ತಾನ ಸೇನೆಯ ಈ ನಡೆಯಿಂದಾಗಿ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿತ್ತು. ಇದರಂತೆ 14 ಪಾಕಿಸ್ತಾನ ಸೇನಾ ಕೇಂದ್ರಗಳ ಮೇಲೆ ದಾಳಿ ನಡೆಸಿ, ಇಬ್ಬರನ್ನು ಹತ್ಯೆ ಮಾಡಿತ್ತು ಎಂದು ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿಯಲ್ಲಿರುವ 400 ಶಾಲೆಗಳನ್ನು ಮುಚ್ಚಲಾಗಿದೆ. ಗಡಿ ನುಸುಳುವಿಕೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ನಾಗರೀಕರು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಗೆ 83 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಡಿಯಲ್ಲಿ ಪಾಕಿಸ್ತಾನ ಸೇನೆಯ ದುರ್ನಡತೆ ಕುರಿತಂತೆ ಬುಧವಾರವಷ್ಟೇ ಮಾತನಾಡಿದ್ದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಗಡಿ ನಿಯಂತ್ರಣ ರೇಖೆ ಬಳಿ ಸದಾಕಾಲ ಯೋಧರು ಹೈಅಲರ್ಟ್ ನಲ್ಲಿರಬೇಕಿದೆ. ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದರೆ, ದಿಟ್ಟ ಉತ್ತರವನ್ನು ನೀಡಿ ಎಂದಿದ್ದರು. ಅಲ್ಲದೆ, ಯೋಧರ ತ್ಯಾಗ ಬಲಿದಾನಕ್ಕೆ ಇಡೀ ದೇಶ ಹೆಮ್ಮೆ ಪಡುತ್ತಿದೆ ಎಂದು ತಿಳಿಸಿದ್ದರು.

Comments are closed.