ನವದೆಹಲಿ: ಗಗನಕ್ಕೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ದರದಿಂದ ಈಗಾಗಲೇ ತಲೆಕೆಡಿಸಿಕೊಂಡಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ ರು. 0.89 ಪೈಸೆ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ 0.86 ಪೈಸೆ ಏರಿಕೆಯಾಗಿದೆ.
ಹಲವು ದಿನಗಳಿಂದಲೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಗಳ ಬೆಲೆ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.