ರಾಷ್ಟ್ರೀಯ

ಇನ್ ಕ್ರೆಡಿಬಲ್ ಇಂಡಿಯಾಗೆ ಮೋದಿಯೇ ನೂತನ ರಾಯಭಾರಿ!

Pinterest LinkedIn Tumblr

modhiಇನ್ ಕ್ರೆಡಿಬಲ್ ಇಂಡಿಯಾಗೆ ಪ್ರಧಾನಿ ಮೋದಿಯೇ ನೂತನ ರಾಯಭಾರಿ! ಇನ್ ಕ್ರೆಡಿಬಲ್ ಇಂಡಿಯಾಗೆ ಪ್ರಧಾನಿ ಮೋದಿಯೇ ನೂತನ ರಾಯಭಾರಿ!
ನವದೆಹಲಿ: ಭಾರತ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ರಮ ಇನ್ ಕ್ರೆಡಿಬಲ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅವರೇ ರಾಯಭಾರಿಯಾಗುವುದು ಬಹುತೇಕ ಖಚಿತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಇನ್ ಕ್ರೆಡಿಬಲ್ ಇಂಡಿಯಾಗೆ ರಾಯಭಾರಿಯಾಗಲಿರುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಅಮಿತಾಬ್ ಬಚ್ಚನ್ ಬಾಲಿವುಡ್ ಸ್ಟಾರ್ ಗಳು ರಾಯಭಾರಿಯಾಗಲಿದ್ದಾರೆ ಎಂಬ ವದಂತಿಗಳಿಗೆ ತೆರೆಬಿದ್ದಿದೆ.
ಅಸಹಿಷ್ಣುತೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಕೋಲಾಹಲಕ್ಕೆ ಕಾರಣನಾಗಿದ್ದ ಬಾಲಿವುಡ್ ನಟ ಆಮೀರ್ ಖಾನ್ ಅವರನ್ನು ಇನ್ ಕ್ರೆಡಿಬಲ್ ಇಂಡಿಯಾ ರಾಯಭಾರಿ ಸ್ಥಾನದಿಂದ ತೆಗೆದು ಹಾಕಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಎರಡುವರೆ ವರ್ಷಗಳಲ್ಲಿ ಭಾರತ ಹಾಗೂ ವಿದೇಶಗಳಲ್ಲಿ ಪ್ರವಾಸೋದ್ಯಮದ ಬಗ್ಗೆ ಮಾತನಾಡಿರುವ ವಿಡಿಯೋಗಳನ್ನು ಬಳಸಿ ವಿದೇಶಿ ಪ್ರವಾಸಿಗರನ್ನು ಸೆಳೆಯಲು ಯತ್ನಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರೆಡಿಯೋದಲ್ಲಿಯೂ ಇನ್ ಕ್ರೆಡಿಬಲ್ ಇಂಡಿಯಾದ ಪ್ರಚಾರ ನಡೆಯಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಭಾಗಗಳ, ವೈಶಿಷ್ಟ್ಯಗಳ ಬಗ್ಗೆ ಮಾತನಾಡಿರುವ ಎರಡು ರೀತಿಯ ವಿಡಿಯೋಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

Comments are closed.