ರಾಷ್ಟ್ರೀಯ

ಅತ್ಯಾಚಾರ ಸಂತ್ರಸ್ತೆಗೆ ಪೋಲಿ ಪ್ರಶ್ನೆ ಕೇಳಿದ್ದ ಕೇರಳ ಪೊಲೀಸ್ ಅಧಿಕಾರಿಯ ಅಮಾನತು

Pinterest LinkedIn Tumblr

rape-2ತಿರುವನಂತಪುರಂ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರಿಗೆ ಪೋಲಿ ಪ್ರಶ್ನೆ ಕೇಳಿದ್ದ ಪೊಲೀಸ್ ಅಧಿಕಾರಿಯನ್ನು ಸೋಮವಾರ ಕೇರಳ ಎಲ್ ಡಿಎಫ್ ಸರ್ಕಾರ ಅಮಾನತುಗೊಳಿಸ ಆದೇಶ ಹೊರಡಿಸಿದೆ.
ಅತ್ಯಾಚಾರ ಸಂತ್ರಸ್ತೆಗೆ ನಿನಗೆ ಹೆಚ್ಚು ಖುಷಿ ಕೊಟ್ಟಿದು ಯಾರು ಎಂಬ ಅಸಭ್ಯ ಪ್ರಶ್ನೆ ಕೇಳಿದ ಆರೋಪದ ಮೇಲೆ ತ್ರಿಸೂರ್ ಜಿಲ್ಲೆಯ ಪೆರಮಂಗಲಂ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಎಂ.ವಿ.ಮಣಿಕಂಠನ್ ಅವರನ್ನು ಪೊಲೀಸ್ ಮಹಾನಿರ್ದೇಶಕ ಎ.ಆರ್.ಅಜಿತ್ ಕುಮಾರ್ ಅಮಾನತುಗೊಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ನಂತರ ಕುಮಾರ್ ಅವರು ಮಣಿಕಂಠನ್ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ.
ಪತಿಯ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಆಕೆಯ ನೋವಿಗೆ ಸ್ಪಂದಿಸುವುದನ್ನು ಬಿಟ್ಟು, ಅಸಭ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಖ್ಯಾತ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದರು. ಈ ಬಗ್ಗೆ ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ.

Comments are closed.