ರಾಷ್ಟ್ರೀಯ

ಕಾಶ್ಮೀರದಲ್ಲಿ ಇಂದು ಮತ್ತೊಬ್ಬ ಯೋಧ ಹುತಾತ್ಮ

Pinterest LinkedIn Tumblr
Uri: Army personnel take positions and moves towards the site where militants were hiding during an encounter at Lachipora in Uri Sector of north Kahsmir on Wednesday. PTI Photo  (PTI9_21_2016_000144B)
Uri: 

ಜಮ್ಮು: ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆಸಿದ್ದು, ಬುಧವಾರ ಮಚಿಲ್ ಸೆಕ್ಟರ್ ನಲ್ಲಿ ನೆಡದ ದಾಳಿಯಲ್ಲಿ ಮತ್ತೊಬ್ಬ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದ ನೌಶೇರ ಸೆಕ್ಟರನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.
ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಭಾರತೀಯ ಸೇನಾ ಶಿಬಿರಗಳನ್ನು ಹಾಗೂ ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದು, ಇದಕ್ಕೆ ಭಾರತ ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ನವೆಂಬರ್ 6ರಂದು ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು ಮತ್ತು ಐವರು ಗಾಯಗೊಂಡಿದ್ದರು.

Comments are closed.