ರಾಷ್ಟ್ರೀಯ

ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಸಾವು, ಹಲವರಿಗೆ ಗಾಯ

Pinterest LinkedIn Tumblr

up

ನವದೆಹಲಿ: ಉತ್ತರ ಪ್ರದೇಶದ ಶಾಹಿದಾಬಾದ್ ನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 10 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಶಾಹಿಬಾದ್ ನಲ್ಲಿರುವ ಡೇನಿಮ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಬೆಂಕಿ ಅವಘಡ ಸಂಭವಿಸಿರುವುದಾಗಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಮಾಹಿತಿ ತಿಳಿಯಿತು. ಕೂಡಲೇ ಅಗ್ನಿಶಾಮಕ ದಳದ ವಾಹನದೊಂದಿಗೆ ಸ್ಥಳಕ್ಕೆ ಹೋಗಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವಘಡ ಸಂಭವಿಸುವ ವೇಳೆ ಕೆಲಸಗಾರರು ಕಾರ್ಖಾನೆಯ ಒಳಗಿದ್ದರು. ಪ್ರಸ್ತುತ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Comments are closed.