ರಾಷ್ಟ್ರೀಯ

ನೋಟು ನಿಷೇಧದ ವಿರುದ್ಧ ವಿರೋಧ ಪಕ್ಷಗಳ ಪ್ರತಿಭಟನೆ ; ರಾಜ್ಯಸಭಾ ಕಲಾಪ ನ.21ಕ್ಕೆ ಮುಂದೂಡಿಕೆ

Pinterest LinkedIn Tumblr

raajyasabha

ನವದೆಹಲಿ: ನೋಟು ನಿಷೇಧ ಕುರಿತಂತೆ ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಲೋಕಸಭೆ, ರಾಜ್ಯಸಭೆ ಎರಡರಲ್ಲೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದು, ಪ್ರತಿಪಕ್ಷಗಳ ಗದ್ದಲದಿದಂದಾಗಿ ರಾಜ್ಯಸಭಾ ಕಲಾಪವನ್ನು ನ.21ಕ್ಕೆ ಮುಂದೂಡಲಾಗಿದೆ.

ರು.500 ಹಾಗೂ 1,000 ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ದೇಶದಲ್ಲಿ ಆರ್ಥಿಕ ಸಮಸ್ಯೆಯನ್ನುಂಟು ಮಾಡಿದೆ ಎಂದು ಎಂದು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ನೋಟು ನಿಷೇಧ ಕುರಿತಂತೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ, ಅಲ್ಲದೆ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಒಂದೆಡೆ ಪ್ರತಿಪಕ್ಷಗಳು ನೋಟು ನಿಷೇಧ ಕುರಿತಂತೆ ಪ್ರತಿಭಟನೆ ನಡೆಸುತ್ತಿದ್ದಂತೆ ಮತ್ತೊಂದೆಡೆ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆ ನಡೆಸುತ್ತಿದ್ದು, ನೋಟು ನಿಷೇಧವನ್ನು ಉರಿ ಉಗ್ರ ದಾಳಿಗೆ ಹೋಲಿಕೆ ಮಾಡಿದ್ದ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರು ಕ್ಷಮೆಯಾಚಿಸುವಂತೆ ಆಗ್ರಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ತೀವ್ರ ಗದ್ದಲ ಉಂಟಾಗಿ ಕಲಾಪಕ್ಕೆ ಅಡ್ಡಿಯಾದುದರಿಂದ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು.

ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12ಕ್ಕೆ ಹಾಗೂ ರಾಜ್ಯಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ನೋಟು ನಿಷೇಧ ಕುರಿತಂತೆ ಹೇಳಿಕೆ ನೀಡಿದ್ದ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನ ಸೇನಾ ನೆಲೆಯ ಮೇಲೆ ಪಾಕಿಸ್ತಾನ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ಸಂಭವಿಸಿದ ಸಾವುಗಳಿಗಿಂತಲೂ ದುಪ್ಪಟ್ಟು ಸಾವುಗಳು ನೋಟು ನಿಷೇಧದಿಂದ ಸಂಭವಿಸಿದೆ. ಬಡವರ ಸಾವಿನ ಶಿಕ್ಷೆಯನ್ನು ಯಾರಿ ಮೇಲೆ ಹೊರಿಸೋಣ. ಬಿಜೆಪಿಯದ್ದು ತಪ್ಪು ನೀತಿ ಎಂದು ಹೇಳಿದ್ದರು.

Comments are closed.