ರಾಷ್ಟ್ರೀಯ

ಜಯಲಲಿತಾ ಆರೋಗ್ಯವಾಗಿದ್ದರೂ ಐಸಿಯುನಲ್ಲಿ!

Pinterest LinkedIn Tumblr

jayalalitha-mariyappanಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಚೆನ್ನಾಗಿದ್ದು, ಈಗ ವೆಂಟಿಲೇಟರ್ ಇಲ್ಲದೆಯೇ ಆರಾಮವಾಗಿ ಉಸಿರಾಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಪತ್ರಕರ್ತರೊಂದಿಗೆ ಮಾತನಾಡಿದ ರೆಡ್ಡಿ ಅವರು, ಜಯಲಲಿತಾ ಅವರಿಗೆ ರೋಗ ನಿರೋಧಕ ಶಕ್ತಿ ಬಹಳಷ್ಟು ಕಡಿಮೆ ಇರುವುದರಿಂದ ಅವರಿಗೆ ಯಾವುದೇ ರೀತಿಯ ಸೋಂಕು ತಗುಲದಿರಲಿ ಎಂದು ಇನ್ನೂ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಶ್ವಾಸಕೋಶದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಸರಾಗವಾಗಿ ಮಾತಾನಾಡುತ್ತಿದ್ದಾರೆ ಮತ್ತು ತಿನ್ನುವುದರಲ್ಲೂ ಸಹಜವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಜಯಲಲಿತಾ ಅವರು ಬಯಸಿದ ತಕ್ಷಣ ಯಾವುದೇ ಕ್ಷಣದಲ್ಲೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ.
ನಮ್ಮ ಪ್ರಯತ್ನ ಮತ್ತು ಜನರ ಪ್ರಾರ್ಥನೆಯಿಂದ ಅವರು ಗುಣಮುಖರಾಗಿದ್ದಾರೆ. ಇನ್ನಷ್ಟು ಸುಧಾರಿಸಲಿ ಎಂಬ ಉದ್ದೇಶದಿಂದ ಆಸ್ಪತ್ರೆಯಲ್ಲೇ ಇರುವಂತೆ ಸಲಹೆ ನೀಡಿದ್ದೇವೆ. ಅವರು ಬಯಸಿದಾಗ ಆಸ್ಪತ್ರೆಯಿಂದ ಮನೆಗೆ ಹೋಗಬಹುದಾಗಿದೆ ಎಂದು ರೆಡ್ಡಿ ತಿಳಿಸಿದ್ದಾರೆ.

Comments are closed.