ರಾಷ್ಟ್ರೀಯ

ನೋಟು ನಿಷೇಧದ ಬಿಸಿ …ಪ್ರಧಾನಿ ಮೋದಿಯನ್ನು ಭೇಟಿಯಾದ ಅರುಣ್ ಜೇಟ್ಲಿ; ಹೊಸ ತಂತ್ರಕ್ಕೆ ಮೊರೆ ಹೋದ ವಿಪಕ್ಷ

Pinterest LinkedIn Tumblr

note

ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧಕ್ಕೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಸೋಮವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಭೇಟಿ ಮಾಡಿದ್ದಾರೆ.

ನೋಟು ನಿಷೇಧದಿಂದಾಗಿ ದೇಶಾದ್ಯಂತ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಸ್ತುತ ಪರಿಸ್ಥಿತಿ ವಿವರಿಸಿದ್ದಾರೆ. ಈ ವೇಳೆ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿನ ಎಟಿಎಂಗಳಿಗೆ ಮತ್ತು ಬ್ಯಾಂಕುಗಳಿಗೆ ಹೊಸ ನೋಟುಗಳ ರವಾನೆ ಮಾಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಪ್ರಮುಖವಾಗಿ ಕೃಷಿ ಸಾಲ ತೀರಿಸಲಾಗದೇ ಭವಣೆ ಪಡುತ್ತಿರುವ ಕೃಷಿಕ ಗ್ರಾಮೀಣ ಭಾಗಗಳನ್ನು ಕೇಂದ್ರವಾಗಿರಿಸಿಕೊಂಡು ಆಯಾ ಪ್ರದೇಶಗಳಲ್ಲಿ ಹಣ ರವಾನೆ ಮಾಡುವ ಕುರಿತು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅತ್ತ ಕೇಂದ್ರ ಸರ್ಕಾರ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದ್ದರೆ ಇತ್ತ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧದ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿವೆ. ಕಾಂಗ್ರೆಸ್, ಟಿಎಂಸಿ, ಆಪ್, ಶಿವಸೇನೆ, ಆರ್ ಜೆಡಿ, ಬಿಎಸ್ ಪಿ, ಎಸ್ ಪಿ ಮತ್ತು ಜೆಡಿಯು ಪಕ್ಷಗಳು ನೋಟು ನಿಷೇಧವನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿವೆ. ಅಲ್ಲದೇ ಕೇಂದ್ರ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಭಾರತ ಬಂದ್ ಗೆ ಕರೆ ನೀಡುವ ಕುರಿತೂ ಚಿಂತನೆ ನಡೆಸುತ್ತಿವೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಡಿಸೆಂಬರ್ ತಿಂಗಳಿನಲ್ಲಿ ವೇತನವಾದ ಬಳಿಕ ಭಾರತ್ ಬಂದ್ ಗೆ ಕರೆ ನೀಡಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ.

Comments are closed.